ಭೀಕರ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 6 ಮಂದಿ ಸಾವು

ಬಿಹಾರದ ಬೆಗುಸರಾಯ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಹತಿದಾ ಜಂಕ್ಷನ್ ನಿಂದ ಬೇಗುಸರಾಯ್ ಕಡೆಗೆ ಐದು ಜನರನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಈ ಅಪಘಾತ ಸಂಭವಿಸಿದೆ.
ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸ್ ವಿವರಗಳ ಪ್ರಕಾರ, ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಇನ್ನೂ ಗುರುತಿಸಲಾಗಿಲ್ಲ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಮತ್ತು ಸಾವನ್ನಪ್ಪಿದವರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth