10:37 AM Wednesday 22 - October 2025

ವಿದೇಶಿ ಕರೆನ್ಸಿ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ 6 ಮಂದಿ ಅರೆಸ್ಟ್

udupi
03/04/2023

ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ದೆಹಲಿ ಲಕ್ಷ್ಮೀನಗರದ ಮೊಹ್ಮದ್ ಪೊಲಾಶ್ ಖಾನ್ (42), ಮುಂಬೈ ಇಂದಿರಾನಗರದ ನಿವಾಸಿ ಮುಹಮ್ಮದ್ ಬಿಲಾಲ್ ಶೇಖ್ (43), ಪಶ್ಚಿಮ ಬಂಗಾಳ ಮೂಲದ ನಾರ್ಥ್ ಈಸ್ಟ್ ದೆಹಲಿ ನಿವಾಸಿ ಮಹಮ್ಮದ್ ಫಿರೋಝ್ (30), ಹರಿಯಾಣ ರಾಜ್ಯದ ಫರೀದಾಬಾದ್ ನಿವಾಸಿ ನೂರ್ ಮುಹಮ್ಮದ್ (36) ಹಾಗೂ ಈಸ್ಟ್ ದೆಹಲಿಯ ಮೀರಜ್ ಖಾನ್ (32), ಮುಹಮ್ಮದ್ ಜಹಾಂಗೀರ (60) ಬಂಧಿತ ಆರೋಪಿಗಳು.

ಬಂಧಿತರಿಂದ ವಿದೇಶಿ ಕರೆನ್ಸಿ ನೋಟುಗಳು, 19 ಮೊಬೈಲ್ ಫೋನ್, 629000 ರೂ ನಗದು, ಮೂರು ಬೈಕ್, 30 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಆರು ಮಂದಿ ಅಂತರಾಜ್ಯ ಖದೀಮರು ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರನ್ನು ವಂಚಿಸಿ ಸುಲಿಗೆ ಮಾಡುತ್ತಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version