ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 6 ಉಗ್ರರ ಹತ್ಯೆ | ಯೋಧ ಹುತಾತ್ಮ, ಮೂವರಿಗೆ ಗಾಯ

encounters
30/12/2021

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ .

ಹತ್ಯೆಗೊಂಡ ಭಯೋತ್ಪಾದಕರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದು, ಮತ್ತಿಬ್ಬರು ಸ್ಥಳೀಯ ಉಗ್ರರಾಗಿದ್ದಾರೆ ಎನ್ನಲಾಗಿದೆ.  ಎಲ್ಲಾ 6 ಮಂದಿ ಜೈಶ್ ಎ ಮೊಹಮ್ಮದ್ ಸಂಘಟನೆ ಜೊತೆ ಗುರುತಿಸಿಕೊಂಡವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕುಲ್ಗಾಮ್ ನ ಮಿರ್ಹಮ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.  ಹತ್ಯೆಗೊಂಡ ಉಗ್ರರು ಹಲವು ಭಯೋತ್ಪಾದಕ ಅಪರಾಧ ಕೃತ್ಯಗಳು ಮತ್ತು ನಾಗರಿಕ ಹಿಂಸಾಚಾರಗಳಲ್ಲಿ ಹಿಂದೆ ಭಾಗಿಯಾಗಿದ್ದರು ಎಂದು ಸಹ ಪೊಲೀಸರು ತಿಳಿಸಿದ್ದಾರೆ.

ಎನ್ ಕೌಂಟರ್  ವೇಳೆಯಲ್ಲಿ ಮೂವರು ಸೇನಾ ಯೋಧರು ಮತ್ತು ಓರ್ವ ಜಮ್ಮು-ಕಾಶ್ಮೀರ ಪೊಲೀಸ್ ಜವಾನರಿಗೆ ಗಾಯವಾಗಿದೆ.  ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತಾಂತರ ಆರೋಪ: ಶಾಲೆಯ ಮಾನ್ಯತೆ ರದ್ದುಪಡಿಸಲು ಬಿಜೆಪಿ, ಆರೆಸ್ಸೆಸ್ ಪ್ರತಿಭಟನೆ

ಮತಾಂತರ ತಡೆಯಲು ವಿಶೇಷ ಕಾರ್ಯಪಡೆ:  ಸಿಎಂ ಬೊಮ್ಮಾಯಿ

ಕೊರೊನಾ ಸ್ಫೋಟ: ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್

ಇತ್ತೀಚಿನ ಸುದ್ದಿ

Exit mobile version