ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರ ದಾಳಿ: 60ಕ್ಕೂ ಅಧಿಕ ಮಂದಿ ಸಾವು, ನೂರಾರು ಜನರಿಗೆ ಗಾಯ

russia
23/03/2024

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಶುಕ್ರವಾರ ರಾತ್ರಿ ಮಾಲ್‌ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಉಗ್ರರು 60ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಘಟನೆ ನಡೆದಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ ನಲ್ಲಿ ನಾಲ್ವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ದಾಳಿ ನಡೆಸಿದ್ದು,  ಈ ವೇಳೆ 60ಕ್ಕೂ ಹೆಚ್ಚು ಜನರು ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಗುಂಡಿನ ದಾಳಿ ಆರಂಭವಾಗಿ ಕೆಲ ಸಮಯದ ಬಳಿಕ ಭೀಕರ ಸ್ಫೋಟ ಸಂಭವಿಸಿದೆ. ಹಾಲ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ ಮೇಲಿನ ದಾಳಿಯನ್ನು ನಿಭಾಯಿಸಲು  ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ  ರಷ್ಯಾದ ಭದ್ರತಾ ಸಂಸ್ಥೆ ಎಫ್‌ ಎಸ್‌ ಬಿ ಹೇಳಿದೆ. ಜೊತೆಗೆ ಅಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯವೂ ನಡೆಯುತ್ತಿದೆ.

ಘಟನೆಯ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಪ್ರತಿಕ್ರಿಯಿಸಿದ್ದು, ರಷ್ಯಾ ಮೇಲಿನ ದಾಳಿಯಲ್ಲಿ ಉಕ್ರೇನ್‌ ನ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version