ಡಾ.ಬಿ.ಆರ್.ಅಂಬೇಡ್ಕರ್‌ ರವರ 66ನೇ ಪರಿನಿಬ್ಬಾಣ : BVS, BVFನಿಂದ ಮೊಂಬತ್ತಿ ಮೆರವಣಿಗೆ - Mahanayaka
12:11 AM Wednesday 11 - December 2024

ಡಾ.ಬಿ.ಆರ್.ಅಂಬೇಡ್ಕರ್‌ ರವರ 66ನೇ ಪರಿನಿಬ್ಬಾಣ : BVS, BVFನಿಂದ ಮೊಂಬತ್ತಿ ಮೆರವಣಿಗೆ

bvs bvf
07/12/2022

ಚಾಮರಾಜನಗರ:  ಡಾ.ಬಿ.ಆರ್.ಅಂಬೇಡ್ಕರ್‌ ರವರ 66ನೇ ಪರಿನಿಬ್ಬಾಣದ ಪ್ರಯುಕ್ತ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಬಹುಜನ ವಾಲೆಂಟಿಯರ್ ಫೋರ್ಸ್ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಎಎಸ್‌ ಪಿ ಸುಂದರ್‌ರಾಜ್ ಅವರಿಂದ ಚಾಲನೆಗೊಂಡ ಮೊಂಬತ್ತಿ ಮೆರವಣಿಗೆ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿ ಬಳಿ ಸಮಾವೇಶಗೊಂಡು ಮೊಂಬತ್ತಿ ಹಚ್ಚಿ ಬುದ್ದವಂದನೆ ಸಲ್ಲಿಸುವ ಮೂಲಕ ಮೆರವಣಿಗೆ ಮುಕ್ತಾಯಗೊಂಡಿತು.

ಮೊಂಬತ್ತಿ ಮೆರವಣಿಗೆಗೆ ಚಾಲನೆ ನೀಡಿದ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸುಂದರ್‌ರಾಜ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಲ್ಲಿ ಸಾಕಷ್ಠು ನೋವುಂಡು ಚೆನ್ನಾಗಿ ಓದಿಕೊಂಡು ನಾನಾ ಪದವಿಗಳನ್ನು ಪಡೆದು ಭಾರತ ಸಂವಿಧಾನ ರಚಿಸಿ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇಂದು ಜಿಲ್ಲೆಯ ಮೂಲೆಮೂಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿಬ್ಬಾಣ ದಿನವನ್ನು ಆಚರಿಸುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸುವ ಕೆಲಸ ಆಗುತ್ತಿದೆ. ಬಹುಜನ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಮೊಂಬತ್ತಿ ಮೆರವಣಿಗೆ ನಡೆಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವನಮನ ಸಲ್ಲಿಸುವ ಕೆಲಸ ನಡೆಯುತ್ತಿದೆ. ಅಂಬೇಡ್ಕರ್‌ರವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಿವೈಎಸ್‌ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಂಜುಳ, ಎಸ್‌ ಸಿ, ಎಸ್‌ ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವ ಅಧ್ಯಕ್ಷ  ಸಿ.ಕೆ.ಮಂಜುನಾಥ್, ಸಬ್‌ಇನ್‌ಪೆಕ್ಟರ್ ವೆಂಕಟೇಶ್, ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪರಿಸರ ಪ್ರೇಮಿ ವೆಂಕಟೇಶ್, ಬಿವಿಎಸ್ ಜಿಲ್ಲಾ ಸಂಯೋಜಕ ಪರ್ವತ್‌ರಾಜ್, ಬಿವಿಎಫ್ ಜಿಲ್ಲಾ ಸಂಯೋಜಕ ರವಿಮೌರ್ಯ, ಅಧ್ಯಕ್ಷ ಚಂದ್ರಕಾಂತ್, ಬಿವಿಎಸ್ ವೆಂಕಟೇಶ್, ರಾಜೇಶ್, ಮಹೇಶ್, ನಾಗೇಂದ್ರ, ನವೀನ್, ಮಧುರೇಶ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ