7.11 ಕೋಟಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: 5.76 ಕೋಟಿ ಹಣ ವಶ
ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 5.76 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.
ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ನೌಕರ, ಪೊಲೀಸ್ ಕಾನ್ ಸ್ಟೇಬಲ್ ಮತ್ತು ಸಿಎಂಎಸ್ ಕಂಪೆನಿಯ ಮಾಜಿ ನೌಕರ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ನಡೆದು 54 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 200 ಪೊಲೀಸರು ಭಾಗಿಯಾಗಿದ್ದರು.
ಕಳೆದ ಮೂರು ತಿಂಗಳುಗಳಿಂದ ಆರೋಪಿಗಳು ಸಂಚು ನಡೆಸಿದ್ದರು. ಕಳೆದ 15 ದಿನಗಳಿಂದ ಈ ಪ್ರದೇಶದಲ್ಲಿ ಓಡಾಟ ನಡೆಸಿದ್ದರು.
ಇನ್ನೂ ತನಿಖಾ ತಂಡ ಹಾಗೂ ಸಿಬ್ಬಂದಿಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ 5 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಐವರು ಆರೋಪಿಗಳ ಬಂಧನಕ್ಕಾಗಿ ಶೋಧ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























