ಜೈಲಿನಲ್ಲಿ ಐಶಾರಾಮಿ ಜೀವನ: ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ 7 ಅಧಿಕಾರಿಗಳು ಸಸ್ಪೆಂಡ್ - Mahanayaka
7:55 AM Saturday 18 - October 2025

ಜೈಲಿನಲ್ಲಿ ಐಶಾರಾಮಿ ಜೀವನ: ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ 7 ಅಧಿಕಾರಿಗಳು ಸಸ್ಪೆಂಡ್

suspended
26/08/2024

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿ ಕೂಡ ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.


Provided by

ಘಟನೆ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ಈ ಪ್ರಕರಣದಲ್ಲಿ ಮೇಲಧಿಕಾರಿಗಳು ನೇರವಾಗಿ ಭಾಗಿಯಾಗಿದ್ದರೆ ವರದಿ ಬಂದ ನಂತರ ಕ್ರಮಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಭರವಸೆ ನಿಡಿದರು.

ಜೈಲರ್ ಗಳಾದ ಶರಣಬಸವ ಅಮೀನ್ ಗಢ, ಖಂಡೇವಾಲ್, ಸಹಾಯಕ ಜೈಲರ್ ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅಮಾನತುಗೊಂಡ ಅಧಿಕಾರಿಗಳು ಎಂದು ಗುರುತಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ