ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 7 ಮಂದಿ ರೋಗಿಗಳ ದಾರುಣ ಸಾವು

ಜೈಪುರ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ನಡೆದಿದೆ.
ಕಟ್ಟಡದ ಎರಡನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸಿಬ್ಬಂದಿ ಸುರಕ್ಷತಾ ಕ್ರಮಕೈಗೊಳ್ಳುವ ಬದಲು ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ರೋಗಿಗಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಗ್ನಿ ಅವಘಡದ ಹಿನ್ನೆಲೆ ಹೊಗೆ ವೇಗವಾಗಿ ಹರಡಿ ಆಸ್ಪತ್ರೆಯಾದ್ಯಂತ ವಿಸ್ತರಿಸಿದ್ದು, ರೋಗಿಗಳು ಮತ್ತು ಅವರ ಕುಟುಂಬಗಳಲ್ಲಿ ಭೀತಿ ಮೂಡಿಸಿದೆ. ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್ ಗಳು ಮತ್ತು ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ಇತರ ವಸ್ತುಗಳು ಬೆಂಕಿಯಿಂದ ಸುಟ್ಟುಹೋಗಿವೆ.
ಘಟನೆ ವೇಳೆ ಆಸ್ಪತ್ರೆಯಲ್ಲಿ 210 ರೋಗಿಗಳಿದ್ದರು. ನಾಲ್ಕು ಐಸಿಯುಗಳಲ್ಲಿ ತಲಾ 40 ರೋಗಿಗಳಿದ್ದರು. ರಾತ್ರಿಯಲ್ಲಿ, ಪ್ರತಿ ಐಸಿಯುನಲ್ಲಿ ಒಬ್ಬ ಸಿಬ್ಬಂದಿ ಮಾತ್ರ ಇದ್ದರು, ಅವರು ಬೆಂಕಿ ಹೊತ್ತಿಕೊಂಡ ಕೆಲವೇ ಸಮಯಗಳಲ್ಲಿ ಸ್ಥಳದಿಂದ ಓಡಿ ಹೋಗಿದ್ದರು ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD