ಕಾಡು ಹಂದಿಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್!

ಗುಂಡ್ಲುಪೇಟೆ: ಕಾಡು ಹಂದಿಯನ್ನು ಬೇಟೆಯಾಡಿ ಅಕ್ರಮವಾಗಿ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿರುವ ಘಟನೆ ಪಟ್ಟಣದ ಶಿವಾನಂದ ಸ್ಮಾರಕದ ಬಳಿ ನಡೆದಿದೆ.
ಅಕ್ಷಯ್, ಸುರೇಶ್, ಸುಧೀರ್ ಕುಮಾರ್, ಮಲ್ಲೇಶ್, ನಂದಕುಮಾರ್, ಗುರುಮೂರ್ತಿ, ವಿದ್ವಾನ್ ಬಂಧಿತ ಆರೋಪಿಗಳು. ಇವರು ಕೊತ್ತಲವಾಡಿ ಗ್ರಾಮದ ಎಲ್ಲೆ ಯಾನಗಹಳ್ಳಿ ರಸ್ತೆಯ ಜಮೀನಿನಲ್ಲಿ ಅಕ್ರಮವಾಗಿ ನಾಡ ಬಂದೂಕುಗಳಿಂದ ಗುಂಡು ಹಾರಿಸಿ ಕಾಡುಹಂದಿಯನ್ನು ಬೇಟೆಯಾಡಿ ಕೊಂದು ಮಾಂಸವನ್ನು ಕತ್ತರಿಸಿ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಇನ್ಸ್ ಪೆಕ್ಟರ್ ಮಂಜುನಾಥ್ ನಾಯಕ ನೀಡಿದ ಮೇರೆಗೆ ಗುಂಡ್ಲುಪೇಟೆ ಶಿವಾನಂದ ಸ್ಮಾರಕದ ಬಳಿ ಗುಂಡ್ಲುಪೇಟೆ ಸಬ್ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಾಡು ಹಂದಿ ಮಾಂಸ, ಮೂರು ನಾಡ ಬಂದೂಕು, ಎರಡು ಕಬ್ಬಿಣದ ಮಚ್ಚುಗಳ ಸಮೇತ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಧೀಶರ ಸೂಚನೆ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw