ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ - Mahanayaka
11:27 PM Thursday 23 - October 2025

ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ

chamarajanagara
27/07/2023

ಚಾಮರಾಜನಗರ: ಮೊರಾರ್ಜಿ ವಸತಿ ಶಾಲೆಗಳ ಅವ್ಯವಸ್ಥೆ ಮತ್ತೇ ಬಟಾಬಯಲಾಗಿದ್ದು ಟೊಮೆಟೊ ಬಾತ್ ಸೇವಿಸಿ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಧ ಘಟನೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಇಂದು ಬೆಳಗಿನ ತಿಂಡಿ ಟೊಮೆಟೊ ಬಾತ್ ಅನ್ನು ಸೇವಿಸಿದ್ದ ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸಂಜನಾ(15), ಸಂಗೀತ (13), ಪ್ರಜ್ವಲ್(15) ಎಂಬ ಏಳು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ಉರಿ, ವಾಂತಿ ಕಾಣಿಸಿಕೊಂಡಿದೆ.

ಅಸ್ವಸ್ಥತರನ್ನು ಕೂಡಲೇ ಸಮೀಪದ ಹೊರೆಯಾಲ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಹೊಟ್ಟೆ ನೋವು ಹೆಚ್ಚು ಕಾಣಿಸಿಕೊಂಡ ಹಿನ್ನಲೆ ಆತನನ್ನು ಬೇಗೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮರುಕಳಿಸಿದ ಅಸ್ವಸ್ಥ ಪ್ರಕರಣ:

ಕೆಲ ದಿನಗಳ ಹಿಂದೆಯಷ್ಟೇ ಗುಂಡ್ಲುಪೇಟೆ ತಾಲೂಕಿನ ಯಡನವಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಚಿಕನ್ ತಿಂದು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಈಗ ಅದೇ ಯಡವನಹಳ್ಳಿ ಕ್ಯಾಂಪಸ್ ನಲ್ಲಿರುವ ಗರಗನಹಳ್ಳಿ ಶಾಲೆಯಲ್ಲಿ ಈಗ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದು ಮೊರಾರ್ಜಿ ಶಾಲೆಯ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

ಹೊರೆಯಾಲ ಆಸ್ಪತ್ರೆ ವೈದ್ಯ ಡಾ.ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್ ಹಾಗೂ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಘಟನೆಯಲ್ಲಿ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ