5:33 PM Saturday 18 - October 2025

7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ: ಹರೀಶ್ ಪೂಂಜಾ ಕೇಸ್ ಬಗ್ಗೆ ಸಿಎಂ ಪ್ರತಿಕ್ರಿಯೆ

harish punja
25/05/2024

ಮಂಗಳೂರು: ಬೆಳ್ತಗಂಡಿ ಪೊಲೀಸರ ವಿರುದ್ಧ ಠಾಣೆಗೆ ನುಗ್ಗಿ ಧಮ್ಕಿ ಹಾಕಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಡೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ.

ಕಾನೂನು ಎಲ್ಲರಿಗೂ ಒಂದೇ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಸಂಬಂಧಿಸಿದಂತೆ ತಿರುಗೇಟು ನೀಡಿದ ಸಿಎಂ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜಾ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮರು ಪ್ರಶ್ನೆ ಹಾಕಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

 

ಇತ್ತೀಚಿನ ಸುದ್ದಿ

Exit mobile version