ಕರಂಬಾರು ಶಾಲಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ - Mahanayaka

ಕರಂಬಾರು ಶಾಲಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

karumaru
16/08/2024


Provided by

ಬಜ್ಪೆ: ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ ಶಾಲಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಗುಣಪಾಲ್ ದೇವಾಡಿಗ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕೆಂಜಾರು ಕೆನರಾ ಬ್ಯಾಂಕ್ ಮ್ಯಾನೇಜರ್ ಸ್ವರೂಪ ರಾಕೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ನಮ್ಮ ಕ್ಲಿನಿಕ್ ವೈದ್ಯೆ ಡಾ.ಸಾಯಿಕಿರಣ್, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಅರ್ಬಿ, ನಿವೃತ್ತ ಅಂಚೆ ನೌಕರರಾದ ರಮೇಶ್ ಸುವರ್ಣ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಭೋಜರಾಜ್ ಕೋಟ್ಯಾನ್, ಕೆಂಜಾರು ರಾಮಾಂಜನೇಯ ದೇವಸ್ಥಾನ ಅಧ್ಯಕ್ಷರಾದ ಮಹಾಬಲ ಪೂಜಾರಿ, ಶ್ರೀದೇವಿ ಗೇಮ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ, ಯುವಕ ಮಂಡಲ ಅಧ್ಯಕ್ಷರಾದ ಪಾಂಡುರಂಗ ಪ್ರಭು, ಯುವವಾಹಿನಿ ಕೆಂಜಾರು ಕರಂಬಾರು ಅಧ್ಯಕ್ಷರಾದ ವಿನೋದ್ ಅರ್ಬಿ, ಓಂಕಾರ್ ಫ್ರೆಂಡ್ಸ್ ಕೆಂಜಾರು ಕರಂಬಾರು ಅಧ್ಯಕ್ಷರಾದ ಶಿವರಾಮ್. ಪಿ.ಕುಂದರ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, SDMC ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು ಶಿಕ್ಷಕಿ ಪವಿತ್ರ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ವೈಶಾಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಮತ್ತು ಶಿಕ್ಷಕಿ ಮಾಲಾಶ್ರೀ ವಂದಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ