ಬಿಜೂರು: ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
ಬಿಜೂರು: ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ ದಿನಾಚರಣೆಯ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿರುವ 78ನೇ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣ ಹೊಂದಿದ ಸೇನಾನಿಗಳನ್ನು ಸ್ಮರಿಸಿಕೊಳ್ಳುತ್ತೇವೆ. ಈಗ ನಮ್ಮ ದೇಶವು ಪ್ರತಿ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವುದು ಸಂತೋಷದ ವಿಷಯ. ಮುಂದಿನ ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪದಂತೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿ ಎಂದು ಶುಭ ಹಾರೈಸಿದರು.
ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮೀನಾಕ್ಷಿ ವಿಜಯಕುಮಾರ್ ಬೆಸ್ಕೂರ್ ರವರು ಪ್ರತಿವರ್ಷದಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಥಬೀದಿ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.
ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಬಾ.ಜ.ಪ. ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಪ್ರಿಯದರ್ಶಿನಿ ಬೆಸ್ಕೂರ್, ಕಮಲೇಶ್ ಬೆಸ್ಕೂರ್, ರಥಬೀದಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಶೇರಿಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾದರ್ ದೇವಾಡಿಗ, ಮಂಜುನಾಥ ದೇವಾಡಿಗ, ಪ್ರೇಮಾ ದೇವಾಡಿಗ ಸ್ಥಳೀಯರಾದ ಪುರುಷೋತ್ತಮದಾಸ್, ರವೀಂದ್ರ ಪ್ರಭು, ಸಂದೇಶ್ ಭಟ್, ಸುರೇಶ್ ಶೇರಿಗಾರ್, ಚೆನ್ನಯ್ಯ ಪೂಜಾರಿ, ಪಾಂಡುರಂಗ ಖಾರ್ವಿ, ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.
ಗೌರವಾಧ್ಯಕ್ಷರಾದ ಶೇಖರ್ ಪೂಜಾರಿಯವರು ಉಪಹಾರದ ವ್ಯವಸ್ಥೆ ಮಾಡಿದರು. ರಾಘವೇಂದ್ರ ಪೂಜಾರಿಯವರು ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಭಾಸ್ಕರ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ಗಣೇಶ್ ದೇವಾಡಿಗ ವಂದನಾರ್ಪಣೆಗೈದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth