7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ.
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ.
ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth