ಭಾರೀ ಮೇಘಸ್ಫೋಟ:  ಕ್ಯಾಂಪ್ ನಲ್ಲಿದ್ದ 8ರಿಂದ 10 ಯೋಧರು ಕಣ್ಮರೆ!

uttarakhand horror
05/08/2025

ಉತ್ತರಖಂಡ:  ಭಾರೀ ಮೇಘಸ್ಫೋಟದಲ್ಲಿ ಧರಾಲಿ ಗ್ರಾಮವೇ ಕೊಚ್ಚಿ ಹೋಗಿದ್ದು ಕನಿಷ್ಟ ನಾಲ್ವತು ಮೃತಪಟ್ಟು ಹಲವರು ನಾಪತ್ತೆಯಾಗಿದ್ದಾರೆ. ಈ ನಡುವೆ ಮೇಘ ಸ್ಫೋಟ ವೇಳೆ ಕ್ಯಾಂಪ್ ನಲ್ಲಿದ್ದ 8ರಿಂದ 10 ಯೋಧರು ಕಣ್ಮರೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಭಾರತೀಯ ಸೇನೆ ಕಾರ್ಯಪ್ರವೃತ್ತವಾಗಿದೆ.  ತಮ್ಮವರು ನಾಪತ್ತೆಯಾಗಿದ್ದರೂ, ಯೋಧರು ಪ್ರವಾಸಿಗರು ಮತ್ತು ಸ್ಥಳೀಯರ ರಕ್ಷಣೆಗೆ ಮೊದಲ ಪ್ರಾಶಸ್ತ್ಯ ನೀಡಿದ್ದಾರೆ.

ಘಟನೆಯಲ್ಲಿ ಸುಮಾರು 20ರಿಂದ 22 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಭಾರತೀಯ ಸೇನೆ, ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸೇರಿದಂತೆ ಹಲವು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಘಟನೆ ಸಂಬಂಧ  ನೆರವಿಗೆ 01374222126, 222722, 9456556431 ಸಹಾಯವಾಣಿ ತೆರೆಯಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version