ಎರಡು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
ಮಹಾರಾಷ್ಟ್ರ: ಭಿವಂಡಿ ಪಟ್ಟಣದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ.
ಈ ಕಟ್ಟಡವು ಹತ್ತು ವರ್ಷ ಹಳೆಯ ಕಟ್ಟಡವಾಗಿತ್ತು ಎನ್ನಲಾಗಿದೆ. ಕಟ್ಟಡದ ಮಾಲಿಕ, ಆಹಾರ ಉತ್ಪನ್ನಗಳ ಕಂಪನಿಯನ್ನು ಹೊಂದಿದ್ದ ಇಂದ್ರಪಾಲ್ ಪಾಟೀಲ್ ಅವರನ್ನು ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಬಂಧಿಸಿದ್ದಾರೆ.
ಭಿವಂಡಿ ತಹಸೀಲ್ದಾರ್ ಆದಿಕ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ನೆಲ ಹಾಗೂ ಮೊದಲ ಮಹಡಿಯಲ್ಲಿ ಗೋದಾಮುಗಳು ಮತ್ತು ಮೇಲಿನ ಮಹಡಿಯಲ್ಲಿ ನಾಲ್ಕು ಕುಟುಂಬಗಳು ವಾಸವಾಗಿತ್ತು. ಏಕಾಏಕಿ ಕಟ್ಟಡವು ಸಂಪೂರ್ಣ ಕುಸಿದು ಬಿದ್ದಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಟ್ಟಡದ ಅಡಿಯಲ್ಲಿ ಸಿಲುಕಿ ಮೃತಪಟ್ಟವರನ್ನು ಹಾಗೂ ಗಾಯಾಳುಗಳನ್ನು ಹೊರತೆಗೆದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೇಟಿ ನೀಡಿದ್ದು, ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಘಟನೆಯು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿದ ಅವರು, ಜಿಲ್ಲೆಯಲ್ಲಿ ಅತ್ಯಂತ ಅಪಾಯಕಾರಿ ಎಂದು ಕಟ್ಟಡಗಳ ಸಮೀಕ್ಷೆಯನ್ನು ತಕ್ಷಣವೇ ನಡೆಸಿ, ಮಳೆಗಾಲ ಪ್ರಾರಂಭವಾಗುವ ಮೊದಲು ಅವುಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅವರು ಠಾಣಾ ಜಿಲ್ಲಾಕಾರಿ ಅಶೋಕ್ ಶಿಂಗಾರೆಗೆ ಸೂಚನೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























