ಚಲಿಸುತ್ತಿದ್ದ ಬಸ್ ಗೆ ಬೆಂಕಿ: 8 ಸಾವು, ಹಲವಾರು ಮಂದಿಗೆ ಗಾಯ

ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ ಪ್ರೆಸ್ ವೇನಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ ಸುಮಾರು 60 ಜನರನ್ನು ಹೊತ್ತೊಯ್ಯುತ್ತಿತ್ತು. ಇವರೆಲ್ಲರೂ ಪಂಜಾಬ್ ಮತ್ತು ಚಂಡೀಗಢದ ನಿವಾಸಿಗಳು ಮತ್ತು ಮಥುರಾ-ವೃಂದಾವನದಿಂದ ಹಿಂದಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ಗಮನಿಸಿದ ಸ್ಥಳೀಯರು ಬಸ್ ಅನ್ನು ಬೆನ್ನಟ್ಟಿ ಮತ್ತು ಚಾಲಕನನ್ನು ನಿಲ್ಲಿಸಲು ಹೇಳಿದ್ದಾರೆ. ಅಲ್ಲದೇ ಅವರು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕೆ ಮೀನಾ ರಾಣಿ ಎಎನ್ಐ ಜೊತೆ ಮಾತನಾಡುತ್ತಾ, “ನಾವು ವೃಂದಾವನದಿಂದ ಹಿಂದಿರುಗುತ್ತಿದ್ದೆವು. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂದು ನಮಗೆ ತಿಳಿದಿಲ್ಲ. 10 ಜನರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ 64 ಪ್ರಯಾಣಿಕರಿದ್ದರು” ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth