ಕಂದಕಕ್ಕೆ ಉರುಳಿದ ಟಾಟಾ ಸುಮೋ: ಮಹಿಳೆಯರ ಸಹಿತ 8 ಮಂದಿ ಸಾವು
ಜಮ್ಮು—ಕಾಶ್ಮೀರ: ಟಾಟಾ ಸುಮೋವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಸೇರಿದಂತೆ ಒಟ್ಟು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ನಡೆದಿದೆ.
ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಚಾಲಕ ಉಮರ್ ಗನಿ, ಮೊಹಮ್ಮದ್ ಅಮೀನ್, ಮೊಹಮ್ಮದ್ ಇರ್ಫಾನ್, ಅಫಕ್ ಅಹ್ಮದ್, ಸಫೂರ ಬಾನೋ, ಮುಜಾಮಿಲಾ ಬಾನೋ ಮತ್ತು ಆಸಿಯಾ ಬಾನೋ ಎಂದು ಗುರುತಿಸಲಾಗಿದೆ. 7 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಮಹಿಳೆಯೊಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka