ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ - Mahanayaka
2:13 AM Wednesday 15 - October 2025

ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ

arrest
23/11/2021

ಮಂಗಳೂರು: ಬಾಲಕಿಯನ್ನು ಅಪಹರಿಸಿ ಹತ್ಯೆಗೈದು ಚರಂಡಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಉತ್ತರ ಭಾರತ ಮೂಲದ 20 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.


Provided by

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಾರಿ ಎಂಬಲ್ಲಿ  ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ ಬಾಲಕಿಯನ್ನು ಅಪಹರಿಸಿ ದುಷ್ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ, ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ನಡೆದ ಕಾರ್ಖಾನೆಯನ್ನು ಕೇರಳ ಮೂಲದ ವ್ಯಕ್ತಿಗಳು ನಡೆಸುತ್ತಿದ್ದು, ಇಲ್ಲಿ ಸುಮಾರು 25 ಕಾರ್ಮಿಕರು ದುಡಿಯುತ್ತಿದ್ದರು ಎನ್ನಲಾಗಿದೆ.

ಪ್ರಕರಣದ ಆರೋಪಿಗಳ ಪತ್ತೆಗೆ  ಮಂಗಳೂರು ಪೊಲೀಸರು ಸ್ಥಳೀಯ ಸಿಸಿ ಟಿವಿ ಫುಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯವಾಗಿ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ಈಗಾಗಲೇ ಹಲವು ಆಯಾಮಗಳಲ್ಲಿ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ

ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಕೊಚ್ಚಿ ಕೊಂದ ಮಗಳ ಸ್ನೇಹಿತರು!

ರಾಜ್ಯ ಪ್ರವಾಹ ಸಂಕಷ್ಟದಲ್ಲಿರುವಾಗ ಬಿಜೆಪಿ—ಕಾಂಗ್ರೆಸ್ ನ ಬೇಜವಾಬ್ದಾರಿಯ ಜನ‘ಜಾತ್ರೆ’

ಮಾಂಸಾಹಾರದ ಬಗ್ಗೆ ಹಿರಿಯ ಪೇಜಾವರ ಶ್ರೀಗಳು ಏನು ಹೇಳಿದ್ದರು? | ವಿಡಿಯೋ ವೈರಲ್

ಕಪ್ಪದ ಮಾನಿ ಹಂದ್ರನ ಬೇಟಿ/ ಪೊದು ಸಂಬಂಧ/ಮದುವೆ: ತುಳುನಾಡಿನ ಅವಳಿ ವೀರರು ಕಾನದ-ಕಟದರು: ಸಂಚಿಕೆ: 07

ಪತ್ನಿಯನ್ನು ನಾಲೆಯಲ್ಲಿ ಮುಳುಗಿಸಿ ಕೊಂದು ಹೈಡ್ರಾಮಾ ಆಡಿದ ಪತಿ | ಪೊಲೀಸರಿಗೆ ಈತ ಸಿಕ್ಕಿ ಬಿದ್ದದ್ದು ಹೇಗೆ?

ಇತ್ತೀಚಿನ ಸುದ್ದಿ