12:28 PM Sunday 16 - November 2025

ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ

arrest
16/11/2025

ಮೂಡಿಗೆರೆ: ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್‌ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್‌ ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು ಅಜ್ಞಾತರು ಕಳವುಮಾಡಿರುವುದು ಪತ್ತೆಯಾಗಿದೆ.

ಖಚಿತ ಮಾಹಿತಿಯ ಮೇರೆಗೆ ಸರ್ಕಲ್ ಇನ್ಸ್‌ ಪೆಕ್ಟರ್ ರಾಜಶೇಖರ್ ಅವರ ನೇತೃತ್ವದಲ್ಲಿ ಸಬ್‌ ಇನ್ಸ್‌ಪೆಕ್ಟರ್ ಶ್ರೀನಾಥ್ ರೆಡ್ಡಿ ಹಾಗೂ ಪೊಲೀಸರು ದಾಳಿ ನಡೆಸಿ, ಬಾಪುನಗರದ ಸಬೀನಾ ಎಂಬ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು — ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು ಪುರುಷರು — ಪರಾರಿಯಾಗಿದ್ದು, ಅವರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.

ಐದು ಬಾಗಿಲುಗಳಿರುವ ಗೋಡೌನ್‌ ಗೆ ಕಳ್ಳರು ಒಂದೇ ಬಾಗಿಲಿನ ಮೂಲಕ ನುಗ್ಗಿದ್ದಾರೆ ಎನ್ನಲಾಗಿದೆ.  ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ CPI ರಾಜಶೇಖರ್, SI ಶ್ರೀನಾಥ್ ರೆಡ್ಡಿ, ಶಶಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೈಭವ್, ಸಚಿನ್, ಮಹೇಂದ್ರ, ಮಲ್ಲಿಕಾರ್ಜುನ, ವಿನಯ್, ಮನು ಭಾಗವಹಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version