3:18 AM Thursday 16 - October 2025

ಕೇವಲ 900 ರೂ. ಆಸೆಗೆ ತಂದೆಯನ್ನೇ ಕೊಲೆ ಮಾಡಿದ ಪುತ್ರ

crime news
08/02/2022

ಮುಂಬೈ: 900 ರೂ. ಆಸೆಗೆ ತನ್ನ ತಂದೆಯನ್ನೆ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಹಾರ್ ಪ್ರದೇಶದ ರಂಜನ್‍ಪಾಡಾದಲ್ಲಿ ನಡೆದಿದೆ.

ಜಾನು ಮಾಲಿ(70) ಮೃತ ವ್ಯಕ್ತಿಯಾಗಿದ್ದು, ಮೃತರ ಪುತ್ರ ರವೀಂದ್ರ ಮಾಲಿ ಬಂಧಿತ ಆರೋಪಿಯಾಗಿದ್ದಾನೆ. ಮೃತರಿಗೆ ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು ಒಂದಷ್ಟು ಹಣ ಸಿಗುತ್ತಿತ್ತು. ಆಗ ಜಾನು ಯಾವುದೋ ಕೆಲಸಕ್ಕಾಗಿ ತನ್ನ ಬ್ಯಾಂಕ್ ಖಾತೆಯಿಂದ 900 ರೂ. ಡ್ರಾ ಮಾಡಿದ್ದಾರೆ. ನಂತರ ಆರೋಪಿಯು ಜಾನು ಮಾಲಿ ಅವರಿಂದ ಡ್ರಾ ಮಾಡಿದ ಹಣವನ್ನು ಕೇಳಲು ಪ್ರಾರಂಭಿಸಿದ್ದಾನೆ. ಆದರೆ ಅವರು ಹಣ ನೀಡಲು ನಿರಾಕರಿಸಿದ್ದಾರೆ. ಇದಕ್ಕೆ ಕೋಪಕೊಂಡ ಆರೋಪಿಯು ತಂದೆ ಎನ್ನುವುದನ್ನು ನೋಡದೆ ಥಳಿಸಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಜಾನು ಮಾಲಿ ಅವರನ್ನು ಆರೋಪಿಯು ಮೋಖ್ದಾ ಆಸ್ಪತ್ರೆಗೆ ಕರೆದೊಯ್ಯದಿದ್ದು, ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಅವರನ್ನು ನಾಸಿಕ್‍ನ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಆರೋಪಿ ತಂದೆಯನ್ನು ಆಸ್ಪತ್ರಗೆ ಕರೆದುಕೊಂಡು ಹೋಗುವ ಬದಲು ಮನೆಗೆ ಕರೆತಂದಿದ್ದು, ಮರುದಿನ ಜಾನು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಕುಟುಂಬಸ್ಥರು ಪೊಲೀಸರಿಗೆ ಈ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ರವೀಂದ್ರನನ್ನು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತ್ರಿಪುರಾ ಬಿಜೆಪಿಗೆ ಇಬ್ಬರು ಶಾಸಕರು ರಾಜೀನಾಮೆ

ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ಹೋಟೆಲ್​ ನಲ್ಲೇ ಹೃದಯಾಘಾತದಿಂದ ಸಾವು

ಶೈಕ್ಷಣಿಕ ಸಾಲ ಮನ್ನಾ, ಶಿರವಸ್ತ್ರ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ನಿರಾಕರಣೆ ಖಂಡಿಸಿ : ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಹಿಜಾಬ್-ಕೇಸರಿ ಪೈಟ್ ನಡುವೆ ಎಂಟ್ರಿಯಾದ ನೀಲಿ: ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

ಇತ್ತೀಚಿನ ಸುದ್ದಿ

Exit mobile version