ಶಾಕಿಂಗ್ ನ್ಯೂಸ್: ವಿದ್ಯಾರ್ಥಿಯ ಎದೆಗೆ ಚಾಕು ಎಸೆದ 9ನೇ ತರಗತಿ ವಿದ್ಯಾರ್ಥಿ

student
20/07/2023

ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಉಂಟಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿಯು ಚಾಕು ಎಸೆದ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.

ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನಂತೆ. ಏಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಹರಿತವಾದ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ.

ಅದೃಷ್ಟವಶಾತ್ ಬಲ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆಯಂತೆ.

ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಹಾಗೂ ಇತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಕ್ಕಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version