ವಸತಿ ಶಾಲೆಯಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ: ಆರೋಪಿಯ ಬಂಧನ

paramanna
30/08/2025

ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ.

ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಈತನ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ಚೀರಾಡುವ ಶಬ್ದ ಕೇಳಿ ಇತರ ವಿದ್ಯಾರ್ಥಿನಿಯರು ಓಡಿ ಬಂದು ನೋಡಿದ್ದು, ಈ ವೇಳೆ ಆಕೆ ಹೆರಿಗೆ ನೋವಿನಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕೂಡಲೇ ಸಹಪಾಠಿಗಳು ವಿದ್ಯಾರ್ಥಿನಿಗೆ ಹೆರಿಗೆ ಮಾಡಿಸಿದ್ದರು. ಬಳಿಕ  ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಫ್ ನರ್ಸ್ ಗೆ ವಿಷಯ ತಿಳಿಸಲಾಗಿತ್ತು. ನಂತರ ನೊಂದ ಯುವತಿಯ  ತಾಯಿಗೂ ವಿಷಯ ತಿಳಿಸಲಾಗಿದೆ. ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈ ವಿಚಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ಮಾಹಿತಿ ತಿಳಿದು ಬಂದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು.

ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆ ಆದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್‌ ನರ್ಸ್​ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ಮೇಲೆ‌ ಕೇಸ್ ದಾಖಲು ಮಾಡಿ ಅಮಾನತ್ತು ಮಾಡಲಾಗಿದೆ. ಅಷ್ಟೇ ಅಲ್ಲದೆ ಪ್ರಕರಣವನ್ನ ಮುಚ್ಚಿ ಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದ ಎಂದು ತಿಳಿದುಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version