9ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ: ಬಾಲಕ ಸಾವು
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಘಟನೆಯ ವಿವರ:
ಗೋಗುದ್ದು ಗ್ರಾಮದ ನಿವಾಸಿಗಳಾದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ಎರಡನೇ ಪುತ್ರ ಮುಜಾಮಿಲ್ (15) ಮೃತಪಟ್ಟ ವಿದ್ಯಾರ್ಥಿ. ಈತ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.
ಶಾಲೆಗೆ ರಜೆ ಇದ್ದ ಕಾರಣ ಮುಜಾಮಿಲ್ ಮನೆಗೆ ಬಂದಿದ್ದನು. ಇಂದು ಬೆಳಗಿನ ಜಾವ ಬಹಿರ್ದೆಸೆಗೆಂದು ತೆರಳಿದ್ದ ಸಮಯದಲ್ಲಿ ಈತನಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.
ಮಗನ ಅಕಾಲಿಕ ಮರಣದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಈ ಘಟನೆಯು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























