ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಎಫ್ ಐಆರ್ ದಾಖಲು - Mahanayaka

ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಎಫ್ ಐಆರ್ ದಾಖಲು

yashpal suvarna.jpg
29/07/2026

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಯಶ್ಪಾಲ್ ಸುವರ್ಣ, “ರಾಹುಲ್ ಗಾಂಧಿ 24 ಗಂಟೆಯೂ ಡ್ರಗ್ಸ್ ಪ್ರಭಾವದಲ್ಲಿರುತ್ತಾರೆ” ಎಂದು ಆರೋಪಿಸಿದ್ದಲ್ಲದೆ, “ರಾಹುಲ್ ಗಾಂಧಿ ಅವರ ವಂಶಾವಳಿಯನ್ನೇ ನಾಶ ಮಾಡುತ್ತೇವೆ” ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಈ ಪ್ರಚೋದನಕಾರಿ ಹೇಳಿಕೆಗಳನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪೊಲೀಸರಿಗೆ ದೂರು ನೀಡಿದ್ದರು.

ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಈ ಹೇಳಿಕೆಯನ್ನು ಪ್ರಥಮ ದೃಷ್ಟಿಯಲ್ಲಿ ‘ದ್ವೇಷ ಭಾಷಣ’ (Hate Speech) ಎಂದು ವರ್ಗೀಕರಿಸಿದ್ದು, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 57, 192, 196(2), 351(2), 352 ಮತ್ತು 353(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಈ ಹೇಳಿಕೆಯನ್ನು ಉಗ್ರವಾಗಿ ಖಂಡಿಸಿದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ