ವಿದ್ಯಾರ್ಥಿಗಳ ಮೇಲೆ ಎಫ್ ಐಆರ್ ದಾಖಲಿಸಿ ದ್ವೇಷದ ರಾಜಕಾರಣ: ಅಮಿತ್ ಶಾ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಿಸುವ ಮೂಲಕ ಮತ್ತು ಅವರನ್ನು ಬಲವಂತವಾಗಿ ಬಂಧಿಸುವ ಮೂಲಕ ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯ ಮೇರೆಗೆ ಯುವಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು. ಆದರೆ ಬಿಜೆಪಿ ಸರ್ಕಾರಗಳು ತಾವು ನೀಡಿದ ಮಾತನ್ನು ತಪ್ಪಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ದಬ್ಬಾಳಿಕೆ ಮತ್ತು ಸರ್ಕಾರದ ಈ ಧೋರಣೆಯನ್ನು ಖಂಡಿಸಿರುವ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳನ್ನು ದಮನ ಮಾಡುವ ಇಂತಹ ಕ್ರಮಗಳು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD



























