ದ.ಕ. ಸೇರಿದಂತೆ ರಾಜ್ಯದ ಈ ಜಿಲ್ಲೆಗಳಿಗೆ ಇಂದು ಅಪ್ಪಳಿಸಲಿದೆ  ತೌಕ್ತೆ ಚಂಡಮಾರುತ - Mahanayaka

ದ.ಕ. ಸೇರಿದಂತೆ ರಾಜ್ಯದ ಈ ಜಿಲ್ಲೆಗಳಿಗೆ ಇಂದು ಅಪ್ಪಳಿಸಲಿದೆ  ತೌಕ್ತೆ ಚಂಡಮಾರುತ

tauktae cyclone
14/05/2021


Provided by

ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ.

ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ  ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಮೇ 17ರಿಂದ 18ರವರೆಗೆ ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ.

ತೌಕ್ತೆ ಚಂಡಮಾರುತದ ಪರಿಣಾಮ,  ಕರಾವಳಿಯಲ್ಲಿ ಭಾರೀ ಗಾಳಿ ಸಹಿತ, ಗುಡುಗು, ಮಳೆ ಸಂಭವಿಸಲಾಗಿದೆ.  ಮಳೆಯ ಪ್ರಮಾಣವೂ ಅತ್ಯಧಿಕವಾಗಿರಲಿದೆ. 204.5 ಮೀ.ಮೀ. ಅಧಿಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಮೇ 14ರಿಂದ ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಸೃಷ್ಟಿಯಾಗಲಿದ್ದು, ಕರಾವಳಿಗೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದರೆ, ತುರ್ತು ಸಂದರ್ಭಗಳಲ್ಲಿ 1077 ಅಥವಾ 9483908000 ನಂಬರ್ ಗೆ ಸಂಪರ್ಕ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ.

ತೌಕ್ತೆ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ