ಅನ್ ಲಾಕ್ ಗೆ ಸಿದ್ಧತೆ? | 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಸಾಧ್ಯತೆ - Mahanayaka

ಅನ್ ಲಾಕ್ ಗೆ ಸಿದ್ಧತೆ? | 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಸಾಧ್ಯತೆ

karnataka unlock
09/06/2021


Provided by

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಲಾಕ್ ಡೌನ್ ಜಾರಿಯಾಗಿದ್ದು, ಮನೆಯಲ್ಲಿಯೇ ಬಂಧಿಯಾಗಿರುವ ಜನರಿಗೆ ಇದೀಗ ಮುಕ್ತಿ ಸಿಗುವ ಲಕ್ಷಣಗಳು ಕಂಡು ಬಂದಿದ್ದು, ರಾಜ್ಯದಲ್ಲಿ ಜೂನ್ 14ರ ಬಳಿಕ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಗಳು ನಡೆಯಲಿವೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಮೂರು ಹಂತಗಳಲ್ಲಿ ಲಾಕ್ ಡೌನ್ ಅನ್ ಲಾಕ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ ಇರುವ ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ.  ಎರಡನೇ ಹಂತದಲ್ಲಿ ಬಹುತೇಕ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವ ಸಾಧ್ಯತೆಯಿದ್ದು, ಮೂರನೇ ಹಂತದಲ್ಲಿ ಔಟ್ ಡೋರ್ ಚಟುವಟಿಕೆ, ಮಾರುಕಟ್ಟೆ, ಜಿಮ್, ಥಿಯೇಟರ್ ಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನೂ ಜೂನ್ 14ರ ಬಳಿಕ ಸರ್ಕಾರ ಏನೇನು ಕ್ರಮಗಳನ್ನು ಕೈಗೊಳ್ಳಬೇಕು. ಅನ್ ಲಾಕ್ ಹೇಗಿರಬೇಕು ಎಂಬ ಕುರಿತಂತೆ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ