ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ - Mahanayaka
7:24 AM Wednesday 20 - August 2025

ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

sanchari vijay
15/06/2021


Provided by

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಂಚಾರಿ ಅವರ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲಿಯೇ ಟ್ವೀಟ್ ಮಾಡಿ ಅಗಲಿದ ನಟನಿಗೆ ಸಂತಾಪ ಸೂಚಿಸಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್‌ ಎಂದು ಟ್ವೀಟ್ ಮಾಡಿದೆ.

ಇನ್ನೂ ಸಿಎಂ ಯಡಿಯೂರಪ್ಪ ಕೂಡ ಸಂತಾಪ ಸೂಚಿಸಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ