ಮಾಜಿ ಸಚಿವೆ ಶೈಲಜಾ ಟೀಚರ್ ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ 'ಓಪನ್ ಸೊಸೈಟಿ' ಪ್ರಶಸ್ತಿ - Mahanayaka

ಮಾಜಿ ಸಚಿವೆ ಶೈಲಜಾ ಟೀಚರ್ ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ’ ಪ್ರಶಸ್ತಿ

kk shailaja
20/06/2021


Provided by

ತಿರುವನಂತಪುರಂ: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್ ಅವರಿಗೆ ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿಯ 30 ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. 1994 ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ‘ಓಪನ್ ಸೊಸೈಟಿ’ಯ ಮೊದಲ ಪ್ರಶಸ್ತಿ ಸಂದಿತ್ತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿವಿಯ ಅಧ್ಯಕ್ಷ ಮಿಚೆಲ್ ಇಗ್ನಾಟಿಫ್ ಅವರು, ‘ಶೈಲಜಾ ಟೀಚರ್ ಅವರು ಭಾರತದಲ್ಲಿ ಕೋವಿಡ್ ಸಂದರ್ಭದಲ್ಲಿ ತಮ್ಮ ಸಿಬ್ಬಂದಿಯೊಡನೆ ಸಮರ್ಪಣಾ ಭಾವದಿಂದ ಕೆಲಸ ಮಾಡಿ, ಸಾರ್ವಜನಿಕ ಸೇವೆ ಎಂದರೆ ಏನು? ಎಂಬುದನ್ನು ತೋರಿಸಿಕೊಟ್ಟರು. ಅವರು ಯುವತಿಯರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಶೈಲಜಾ, ನಾವು ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ನೀವು ಕಲಿತ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳಿ. ಸಮಾನ ಸಮಾಜ ನಿರ್ಮಾಣ ಮಾಡುವಲ್ಲಿ ಒಬ್ಬ ನಾಯಕನಾಗಿ ಬೆಳೆಯಿರಿ ಎಂದು ಮಾರ್ಗದರ್ಶನ ನೀಡಿದರು.

ಇತ್ತೀಚಿನ ಸುದ್ದಿ