ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಟ್ಯಾಬ್ ವಿತರಣೆಗೆ ಸಿಎಂ ಯಡಿಯೂರಪ್ಪ ಚಾಲನೆ - Mahanayaka
6:04 AM Saturday 1 - November 2025

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಟ್ಯಾಬ್ ವಿತರಣೆಗೆ ಸಿಎಂ ಯಡಿಯೂರಪ್ಪ ಚಾಲನೆ

yediyurappa
23/06/2021

ಬೆಂಗಳೂರು: ಕಲಿಕಾ ನಿರ್ವಹಣಾ ವ್ಯವಸ್ಥೆ ಬೋಧನೆ-ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

 ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ನಿಟ್ಟಿನಲ್ಲಿ ಸರ್ಕಾರದಿಂದ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

 ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಯೋಜನೆಯು ಗ್ರಾಮೀಣ ವಿದ್ಯಾರ್ಥಿಗಳಿಗೆ  ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ