ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ | ಜಮೀರ್ ಗೆ ಟಾಂಗ್ ನೀಡಿದ್ರಾ ಡಿಕೆಶಿ? - Mahanayaka

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ | ಜಮೀರ್ ಗೆ ಟಾಂಗ್ ನೀಡಿದ್ರಾ ಡಿಕೆಶಿ?

dk shivakumar
26/06/2021


Provided by

ಹಾಸನ: ಬೇರೆ ಪಕ್ಷದಿಂದ ಬಂದು ಪಕ್ಷದೊಳಗೆ ಗುಂಪುಗಾರಿಕೆ ಮಾಡಿ, ಕಾಂಗ್ರೆಸ್ ಗೆ ಹಾನಿ ಮಾಡುವವರ ಬಗ್ಗೆ ಎಚ್ಚರವಹಿಸಿ ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಮತ್ತು ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಪಕ್ಷ ಸೇರಲು ಬಯಸುವವರ ಪಟ್ಟಿಯನ್ನು ಸ್ಥಳೀಯ ಸಮಿತಿಗಳ ಮುಂದೆ ಇಟ್ಟು, ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಪರೋಕ್ಷವಾಗಿ ಜಮೀರ್ ಅಹ್ಮದ್ ಖಾನ್ ಅವರಿಗೆ ಟಾಂಗ್ ನೀಡಿದ್ದಾರೆ ಎಂದು ಹೇಳಲಾಗಿದೆ.

ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ. ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರಿಗೆ ಮಾತ್ರ ಪ್ರವೇಶವಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ