ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ನಮ್ಮ ಸರ್ಕಾರ ಕಾರಣವಲ್ಲ | ನಿರ್ಮಲ ಸೀತಾರಾಮನ್ ಹೇಳಿಕೆ - Mahanayaka

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ನಮ್ಮ ಸರ್ಕಾರ ಕಾರಣವಲ್ಲ | ನಿರ್ಮಲ ಸೀತಾರಾಮನ್ ಹೇಳಿಕೆ

nirmala seetharaman
02/07/2021


Provided by

ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,   ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯದ ಹಸ್ತ ಚಾಚಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ನೀಡಿದೆ  ಮೂರು ಮೂರು ಎಲ್ ಪಿಜಿ ಸಿಲಿಂಡರ್ ವಿತರಣೆ ಮಾಡಿದ್ದೆವು. ಆದರೂ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟಬಾರದು ಎಂದು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.

ಕೆಲವೊಂದು ಸಂಗತಿಗಳು ನಮ್ಮ ಕೈಮೀರಿ ಹೋಗುತ್ತಿವೆ. ಆದರೂ ಅತ್ಯಗತ್ಯ ಆಹಾರ ಪದಾರ್ಥಗಳ ರಫ್ತಿಗೆ ರಫ್ತಿಗೆ ಕಡಿವಾಣ ಹಾಕಲಾಗಿದೆ. ಇನ್ನೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆಯೂ ಕೇಂದ್ರ ಸರ್ಕಾರದಿಂದ ಯಾವುದೇ ಪೂರೈಕೆ ಕೊರೆತೆಯಾಗಿಲ್ಲ. ರಾಜ್ಯ ಸರ್ಕಾರದ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕಕ್ಕೆ 14ನೇ ಹಣಕಾಸು ಆಯೋಗದಿಂದ ಬರಬೇಕುದ್ದ 5 ಸಾವಿರ ಕೋಟಿಗೆ ನಾನು ಅಡ್ಡಿ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿರುವುದು ಸರಿಯಲ್ಲ,  ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ನಡೆದ ಹಣಕಾಸು ಅಕ್ರಮಗಳ ಬಗ್ಗೆಯೂ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ