ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವವರು ರೈತರಲ್ಲ | ಶೋಭಾ ಕರಂದ್ಲಾಜೆ - Mahanayaka

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವವರು ರೈತರಲ್ಲ | ಶೋಭಾ ಕರಂದ್ಲಾಜೆ

shobha karandlaje
10/07/2021


Provided by

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ  ಈ ಬಗ್ಗೆ ಮಾತನಾಡಿದ ಅವರು, ನಾನೊಬ್ಬಳು ರೈತನ ಕುಟುಂಬದಿಂದ ಬಂದವಳಾಗಿದ್ದೇನೆ. ಕೇಂದ್ರವು ರೈತರ ಹಿತದೃಷ್ಟಿಯಿಂದ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದೆ. ನಾನು ರೈತರೊಂದಿಗೆ ಮಾತುಕತೆ ನಡೆಸಬಹುದು. ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡಬಹುದು. ಆದರೆ, ರಾಜಕೀಯದಿಂದ ಪ್ರೇರಿತರಾದವರೊಂದಿಗೆ ಮಾತುಕತೆ ಸಾಧ್ಯವಿಲ್ಲ ಎಂದರು.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು, ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ. ರಾಜಕೀಯದಿಂದ ಪ್ರೇರಿತರಾದ ವ್ಯಕ್ತಿಗಳು ರೈತರನ್ನು ಬಲಿಪಶುಗಳನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಇತ್ತೀಚಿನ ಸುದ್ದಿ