ದೇಶದ್ರೋಹಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ | ಭಾರತೀಯರನ್ನು ಪಾಕಿಸ್ತಾನದವರು ಎಂದ ಭಟ್
02/11/2020
ಮಂಗಳೂರು: ಭಾರತವನ್ನೇ ಪಾಕಿಸ್ತಾನ ಎಂದು ಹೇಳುವ ಮೂಲಕ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ದೇಶದ್ರೋಹಿ ಹೇಳಿಕೆ ನೀಡಿದ್ದು, ಮಂಗಳೂರಿನ ಉಳ್ಳಾಲವನ್ನು ನೋಡಿದರೆ, ಪಾಕಿಸ್ತಾನವನ್ನು ನೋಡಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಎಂದು ಭಾರತೀಯರಿಗೆ ಅವರು ಅವಮಾನ ಮಾನ ಮಾಡಿದ್ದಾರೆ.
ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜನಸಂಖ್ಯಾ ವಿಚಾರವಾಗಿ ಮಾತನಾಡಲು ಆರಂಭಿಸಿದರು. ಬಳಿಕ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ದೈವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕೆ ಆಯಿತು..? ನಮ್ಮವರ ಸಂಖ್ಯೆ ಕಡಿಮೆ ಇತ್ತು ಅವರ ಸಂಖ್ಯೆ ಹೆಚ್ಚಾಗಿತ್ತು ಎಂದು ಕೋಮುವಾದ ಹರಡಿದರು.




 
 






















