ಮುಂದಿನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ! - Mahanayaka

ಮುಂದಿನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ!

basavaraj bommai
27/07/2021

ಬೆಂಗಳೂರು: ಮುಂದಿನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಹೆಸರು ಬಹುತೇಕ ಖಚಿತ ಎಂಬ ಸುದ್ದಿ ಬಂದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗಿದೆ. ನಾಳೆಯೇ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.


Provided by

ಇದು ಸದ್ಯದ ಮಾಹಿತಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ  ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಇನ್ನೂ ಬಸವರಾಜ್ ಬೊಮ್ಮಾಯಿ ಅವರ ಹೆಸರು, ಅಧಿಕೃತವಾಗಿ ಘೋಷಣೆಯಾಗುವುದಕ್ಕೂ ಮೊದಲೇ, ಬೊಮ್ಮಾಯಿ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ.  ಕೆಲವೇ ಕ್ಷಣಗಳಲ್ಲಿ ಅಂತಿಮವಾಗಿ ಸಿಎಂ ಹೆಸರು ಘೋಷಣೆಯಾಗಲಿದೆ. ಮುಂದಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ