ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ? - Mahanayaka
10:30 AM Saturday 23 - August 2025

ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ?

arrest
24/09/2021


Provided by

ಬೆಂಗಳೂರು: ಬೆಂಗಳೂರಿನಲ್ಲಿ ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗಳನ್ನು ಸರ್ವೇ ಮಾಡಿ, ಬೆಲೆಬಾಳುವ ವಸ್ತುಗಳಿರುವ ಮನೆಗಳನ್ನು ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಇವರು ಮಾಡುತ್ತಿದ್ದ ಪ್ಲಾನ್ ಬೆಚ್ಚಿ ಬೀಳಿಸಿದೆ.

ನಾಟಿ ಹಸುವಿನ ತುಪ್ಪ ತಂದಿದ್ದೇವೆ ಎಂದು ತುಪ್ಪ ಮಾರುವವರ ವೇಷದಲ್ಲಿ ಬರುತ್ತಿದ್ದ ತಂಡ, ಇದು ಗುಜರಾತಿ ಗಿರ್ ತಳಿಯ ಹಸುವಿನ ತುಪ್ಪ ಎಂದು ಮನೆಯವರನ್ನು ಸೆಳೆಯುತ್ತಿದ್ದರು. ತುಪ್ಪ ಮಾರಾಟ ಮಾಡುವಾಗ ಮನೆಯನ್ನು ಗಮನಿಸುತ್ತಿದ್ದ ಇವರು, ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ನೋಡಿ, ಎರಡೇ ದಿನದಲ್ಲಿ ಆ ಮನೆಗಳನ್ನು ದರೋಡೆ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ತುಪ್ಪ ಮಾರಾಟ ಮಾಡುವ ಸೋಗಿನಲ್ಲಿ ಹೋಗುತ್ತಿದ್ದ ಗೌರಿಕಿಶೋರಿ ಹಾಗೂ ನೀರುಆದಾ ಎಂಬ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಇದೇ ತಂಡದ ಸದಸ್ಯರು ನಕಲಿ ಚಿನ್ನ ಮಾರಾಟ ಮಾಡಿ ಜನರನ್ನು ವಂಚಿಸಿದ ಆರೋಪವನ್ನೂ ಹೊಂದಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ: ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸಹಿತ ನಾಲ್ವರು ಸಾವು

ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

ಬಿಜೆಪಿ ಚುನಾವಣೆಗೆ ಮಾತ್ರ ಹಿಂದುಳಿದ ವರ್ಗಗಳನ್ನು ಬಳಸುತ್ತಿರುವುದು ಬಯಲಾಗಿದೆ | ಮಾಯಾವತಿ ಆಕ್ರೋಶ

ತಾತಾ ಆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ | ದೇವೇಗೌಡ್ರ ಮನೆಯಲ್ಲಿ ಸಂಭ್ರಮ

ಮೃತಪಟ್ಟ ಪ್ರತಿಭಟನಾಕಾರನ ಮೃತದೇಹಕ್ಕೆ ಥಳಿಸಿ, ಒದ್ದು ವಿಕೃತಿ ಮೆರೆದ ಪತ್ರಕರ್ತ

ಇತ್ತೀಚಿನ ಸುದ್ದಿ