ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್ - Mahanayaka
11:02 PM Wednesday 15 - October 2025

ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್

ashwathnarayan
04/10/2021

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಇನ್ನೇನಿದ್ದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದು, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಒಡೆದು ಚೂರಾಗುತ್ತಿದೆ ಎಂದು ಅವರು ಟೀಕಿಸಿದರು.


Provided by

ಮೈಸೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಎಂದಿಗೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಡುಕ ಕಾಂಗ್ರೆಸ್ ನಾಯಕರಿಗೆ ಹುಟ್ಟಿದೆ. ಹೀಗಾಗಿ ಇಲ್ಲದ ಕಥೆಗಳನ್ನು ಕಟ್ಟಿ ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಒಡೆದು ಚೂರಾಗುತ್ತಿದೆ. ಯಾರು ನಾಯಕರಾಗುತ್ತಾರೆ ಎಂಬ ಹುಡುಕಾಟ ನಡೆಯುತ್ತಿದೆ. ಈ ನಡುವೆ ರಾಜ್ಯದಲ್ಲಿ ಕೆಲವರು ನಾನು ಸಿಎಂ ಆಗುತ್ತೇನೆ, ತಾನು ಸಿಎಂ ಆಗುತ್ತೇನೆ ಅಂತ ಕೆಲವರು ಹಗಲು ಗನಸು ಕಾಣುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಶ್ವಥ್ ನಾರಾಯಣ ಟಾಂಗ್ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ

ಈ ಬಾರಿಯೂ ಸಿಗಲಿಲ್ಲ ಬಿಜೆಪಿ ಟಿಕೆಟ್: ಮಹತ್ವದ ತೀರ್ಮಾನ ಕೈಗೊಂಡ ಪ್ರಮೋದ್ ಮುತಾಲಿಕ್

ಅಕ್ಟೋಬರ್ 5ರಂದು ಮೈಸೂರಿನಲ್ಲಿ ‘ಮಹಿಷ ದಸರಾ’ | ಅನುಮತಿ ನೀಡದ ಜಿಲ್ಲಾಡಳಿತ!]

ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು

ರೈತರ ಹತ್ಯಾಕಾಂಡ: ಬೇಡಿಕೆ ಈಡೇರದ ಹೊರತು ಮೃತ ರೈತರ ಅಂತ್ಯಸಂಸ್ಕಾರ ಮಾಡಲ್ಲ |  ರಾಕೇಶ್ ಟಿಕಾಯತ್ ಪಟ್ಟು

ಪ್ರವಾದಿಯ ಅವಹೇಳನಾಕಾರಿ ವ್ಯಂಗ್ಯ ಚಿತ್ರ ಬಿಡಿಸಿದ್ದ ವಿವಾದಿತ ಕಲಾವಿದ ಅಪಘಾತದಲ್ಲಿ ಸಾವು!

ಇತ್ತೀಚಿನ ಸುದ್ದಿ