ಜೋಬೈಡನ್, ಕಮಲಾ ಹ್ಯಾರಿಸ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ - Mahanayaka

ಜೋಬೈಡನ್, ಕಮಲಾ ಹ್ಯಾರಿಸ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

08/11/2020


Provided by

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಜೋ ಬೈಡನ್ ಅವರನ್ನು ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.

 ‘ಜೋ ಬೈಡನ್ ಅವರೇ, ಅದ್ಭುತ ಗೆಲುವಿಗಾಗಿ ಅಭಿನಂದನೆಗಳು. ಉಪಾಧ್ಯಕ್ಷರಾಗಿದ್ದಾಗ ಭಾರತ-ಅಮೆರಿಕ ಬಾಂಧವ್ಯ ಗಟ್ಟಿಗೊಳಿಸುವುದಕ್ಕೆ ನಿಮ್ಮ ಕೊಡುಗೆ ನಿರ್ಣಾಯಕ ಮತ್ತು ಅಮೂಲ್ಯವಾದದ್ದಾಗಿತ್ತು. ಜತೆಯಾಗಿ ಕೆಲಸ ಮಾಡುವ ಮೂಲಕ ಭಾರತ-ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಉತ್ತಮಗೊಳಿಸಲು ಎದುರುನೋಡುತ್ತಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.

ಇದೇ ಸಂದರ್ಭದಲ್ಲಿ ಕಮಲಾ ಹ್ಯಾರಿಸ್ ಅವರಿಗೂ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ‘ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ನಿಮ್ಮ ಅದ್ಭುತ ಯಶಸ್ಸು ನಿಮ್ಮ ಬೆಂಬಲಿಗರಿಗಷ್ಟೇ ಅಲ್ಲ, ಪ್ರತಿಯೊಬ್ಬ ಭಾರತೀಯ ಅಮೆರಿಕನ್ನರಿಗೂ ಹೆಮ್ಮೆಯ ವಿಷಯ. ನಿಮ್ಮ ಬೆಂಬಲ ಮತ್ತು ನಾಯಕತ್ವದೊಂದಿಗೆ ಭಾರತ-ಅಮೆರಿಕ ಬಾಂಧವ್ಯ ಇನ್ನಷ್ಟು ಗಟ್ಟಿಗೊಳ್ಳುವ ವಿಶ್ವಾಸವಿದೆ’ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ