SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ - Mahanayaka
6:41 PM Tuesday 9 - September 2025

SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

sslc
13/10/2021

ಬೆಂಗಳೂರು: SSLC ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2 ಸಾವಿರ ರೂಪಾಯಿ ಹಾಗೂ ಶೇ.75 ಅಂಕಗಳಿಗಿಂತ ಹೆಚ್ಚು ಗಳಿಸಿದವರಿಗೆ ತಲಾ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ ಎಂದು  ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.


Provided by

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, SSLC ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ತಿಳಿಸಿದರು.

ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿ ತಲಾ 2000 ರೂ., ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 15 ಸಾವಿರ ಪ್ರೋತ್ಸಾಹ ಧನ ನೀಡಲಿದ್ದು ಇದಕ್ಕಾಗಿ 51 ಕೋಟಿ ರೂಪಾಯಿ ವೆಚ್ಚ ಭರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸುಗಳಿಗೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆದ 13,000 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಪಾವತಿಸಲು ಆದೇಶಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!

ಆರ್ ಸಿಬಿ ತಂಡದ ನಾಯಕ ಸ್ಥಾನಕ್ಕೆ ಕಣ್ಣೀರಿನ ವಿದಾಯ ಹೇಳಿದ ವಿರಾಟ್ ಕೊಹ್ಲಿ

ಬಾಲಕಿಗೆ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಬಯಲಿಗೆ: ಬಾಲಕಿಯ ಪತಿ ಅರೆಸ್ಟ್

ಮುಟ್ಟಿನ ಸಮಯದ ನೋವನ್ನು ಕಡಿಮೆ ಮಾಡುವುದು ಹೇಗೆ?

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ತಾಯಿ ಮಗುವಿಗೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್

ಮಳೆ ನೀರಿನಲ್ಲಿ ಕೊಚ್ಚಿ ಹೋದ ಲಕ್ಷಾಂತರ ರೂಪಾಯಿಯ ಮೀನುಗಳು!

ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್

ಇತ್ತೀಚಿನ ಸುದ್ದಿ