ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ - Mahanayaka

ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

puneeth rajkumar
29/10/2021


Provided by

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ.

ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿತ್ತು.  ಅಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ.  ಆಸ್ಪತ್ರೆಗಳ ಮೂಲಗಳ ಪ್ರಕಾರ ನಟ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

 ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ಅಪ್ಪು ವರ್ಕ್​ಔಟ್​ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ