ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ - Mahanayaka

ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ

puneeth rajkumar
30/10/2021


Provided by

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದು, ದೆಹಲಿಯಿಂದ ಏರ್ ಇಂಡಿಯಾ 502 ವಿಮಾನದ ಮೂಲಕ  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4:15ಕ್ಕೆ ಅವರು ತಲುಪಲಿದ್ದಾರೆ.

ಏರ್ಪೋರ್ಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎನ್ನುವ ಮಾಹಿತಿ ಲಭಿಸಿದೆ. ಸದ್ಯ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ನಡೆಯುತ್ತಿದೆ.

ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಮೂಲಕ ಕಂಠೀರವ ಸ್ಟೇಡಿಯಂ,  ಚಾಲುಕ್ಯ ಸರ್ಕಲ್, ಕಾವೇರಿ ಜಂಕ್ಷನ್, ಯಶವಂತಪುರ, ಗೊರಗುಂಟೆಪಾಳ್ಯ ಮಾರ್ಗವಾಗಿ ಪುನೀತ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಸಂಜೆ 5 ಗಂಟೆಯ ವೇಳೆಗೆ ಮೃತದೇಹ ಕಂಠೀರವ ಸ್ಟುಡಿಯೋಗೆ ಮತ್ತೆ ತಲುಪಲಿದೆ ಬಳಿಕ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ