ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ  ಭಾನುವಾರ ನಡೆಯಲಿದೆ | ಬಸವರಾಜ್ ಬೊಮ್ಮಾಯಿ - Mahanayaka
11:06 AM Thursday 15 - January 2026

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ  ಭಾನುವಾರ ನಡೆಯಲಿದೆ | ಬಸವರಾಜ್ ಬೊಮ್ಮಾಯಿ

puneeth raj kumar
30/10/2021

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಯಾವಾಗ ನಡೆಯುತ್ತದೆ ಎನ್ನುವ ಬಗ್ಗೆ  ಸಂಬಂಧ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಇಂದೇ ಅವರ ಅಂತ್ಯಸಂಸ್ಕಾರವಾಗುತ್ತದೆ ಎನ್ನಲಾಗಿತ್ತು. ಆದರೆ, ಇದೀಗ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಪುನೀತ್ ಅಂತ್ಯಸಂಸ್ಕಾರದ ದಿನಾಂಕವನ್ನು ಘೋಷಿಸಿದ್ದಾರೆ.

ಭಾನುವಾರ ಪುನೀತ್ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.  ಜೊತೆಗೆ ಪುನೀತ್ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಸಿಎಂ ಕರೆ ನೀಡಿದ್ದಾರೆ.

ರಾಷ್ಟ್ರ ಪ್ರಶಸ್ತ್ರಿ ಪುರಸ್ಕೃತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಂಠೀರವ ಸ್ಟುಡಿಯೋದಲ್ಲಿ  ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲಿಯೇ ಪುನೀತ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ