17 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು! - Mahanayaka
1:39 AM Wednesday 15 - October 2025

17 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

om prakash
03/11/2021

ಚಿತ್ರದುರ್ಗ:  ಕಾಲೇಜಿಗೆ ತೆರಳಿದ್ದ 17 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ.


Provided by

ಶಿವಗಂಗಾ ಗ್ರಾಮದ 17 ವರ್ಷ ವಯಸ್ಸಿನ ವಿದ್ಯಾರ್ಥಿ ಓಂ ಪ್ರಕಾಶ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ವೆಂಕಟೇಶ್ವರ ಪಿಯು ಕಾಲೇಜಿಗೆ ತೆರಳಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಈ ವೇಳೆ ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಸಣ್ಣ ಸಣ್ಣ ವಯಸ್ಸಿನವರು ಕೂಡ ಹೃದಯಾಘಾತಕ್ಕೊಳಗಾಗಿ ಮೃತಪಡುತ್ತಿರುವುದು ಇದೀಗ ಜನರ ಆತಂಕಕ್ಕೆ ಕಾರಣವಾಗಿದೆ. ಈ ರೀತಿ ಏಕೆ ಆಗುತ್ತಿದೆ ಎಂಬ ಬಗ್ಗೆ ಆರೋಗ್ಯ ಇಲಾಖೆ ತಕ್ಷಣವೇ ಅಧ್ಯಯನ ನಡೆಸಬೇಕು ಎನ್ನುವ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ