ಶಾಕಿಂಗ್ ನ್ಯೂಸ್: ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು - Mahanayaka
1:51 AM Wednesday 15 - October 2025

ಶಾಕಿಂಗ್ ನ್ಯೂಸ್: ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು

kerala news
25/11/2021

ವೈಪಿನ್: ಒಂದೇ ಕುಟುಂಬದ ಮೂವರು ಕೈಯ ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟು ಓರ್ವರು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ.


Provided by

ಇಲ್ಲಿನ ನೆಝಕಲ್ ವಾರ್ಡ್ ಸದಸ್ಯ ಎ.ಪಿ.ಲಾಲು ಅವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ನೆಝಕಲ್ ನ ಸೈಂಟ್ ಮೇರಿ ಶಾಲೆಯ ಶಿಕ್ಷಕಿಯಾಗಿದ್ದ 49 ವರ್ಷ ವಯಸ್ಸಿನ ಜೆಸ್ಸಿ ಮತ್ತು ಅವರ ಸಹೋದರ 51 ವರ್ಷ ವಯಸ್ಸಿನ ಜೋಸ್ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಜೆಸ್ಸಿ ಅವರ ತಾಯಿ 80 ವರ್ಷ ವಯಸ್ಸಿನ ರೀಟಾ ಅವರು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಆದರೆ, ಪೊಲೀಸರು ಧಾವಿಸುವ ವೇಳೆ ಅವರು ಜೀವಂತವಿದ್ದರು. ಅವರನ್ನು ತಕ್ಷಣವೇ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಝಕಲ್ ಚರ್ಚ್ ನ ನಾಲ್ಕನೇ ವಾರ್ಡ್ ನ ನರೋಡ್ ನಲ್ಲಿ ಈ ಘಟನೆ ನಡೆದಿದ್ದು, ತಮ್ಮ ಮಣಿಕಟ್ಟು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ದೊರೆತ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದ್ದು, ಈ ವೇಳೆ ಜೆಸ್ಸಿ ಹಾಗೂ ಜೋಸ್ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದು ಪತ್ತೆಯಾಗಿತ್ತು. ಇವರ ತಾಯಿ ರೀಟಾ ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದರೆ, ಈ ಮೂವರು ಕೂಡ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಈಗಾಗಲೇ ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರೈಲಿನಡಿಗೆ ತಲೆಯಿಟ್ಟು ಪಿಯು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಜಾತಿ ಪ್ರಜ್ಞೆಯ ಬೇರುಗಳೂ ಮಾರುಕಟ್ಟೆಯ ಒತ್ತಡಗಳೂ | ವ್ಯವಸ್ಥೆಯನ್ನು ವಿಭಜಿಸುವ ಆಹಾರ ಶೋಷಿತರನ್ನು ಒಗ್ಗೂಡಿಸಲೂ ಸಾಧ್ಯ

ಬಡ ಜನತೆಗೆ ಸಿಹಿ ಸುದ್ದಿ ನೀಡಿದ ಪ್ರಧಾನಿ: ಉಚಿತ ಅಕ್ಕಿ ಯೋಜನೆ ಮುಂದುವರಿಕೆ

ಪುನೀತ್ ರಾಜ್ ಕುಮಾರ್ ಜೀವನಾಧರಿತ ಸಿನಿಮಾ: ನಾಯಕ ಯಾರು ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ಕ್ಷಮೆ ಕೇಳಿ ದೊಡ್ಡತನ ಮೆರೆದ ಆಮೀರ್ ಖಾನ್ | ಅಷ್ಟಕ್ಕೂ ನಡೆದದ್ದೇನು ಗೊತ್ತಾ?

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ: ಹಿಂದೂ ಜಾಗರಣ ವೇದಿಕೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು

ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದ ಸಚಿವ!

ಇತ್ತೀಚಿನ ಸುದ್ದಿ