ಬದುಕಿನ ದಾರಿ ಮುಗಿಸಿ ಹೊರಟೇ ಬಿಟ್ಟರು: ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರ ಜೊತೆಗೆ ನಟಿಸಿದ್ದ ಶಿವರಾಮಣ್ಣ - Mahanayaka

ಬದುಕಿನ ದಾರಿ ಮುಗಿಸಿ ಹೊರಟೇ ಬಿಟ್ಟರು: ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರ ಜೊತೆಗೆ ನಟಿಸಿದ್ದ ಶಿವರಾಮಣ್ಣ

kannada actor shivaram
04/12/2021


Provided by

ಬೆಂಗಳೂರು: ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  84 ವರ್ಷ ವಯಸ್ಸಿನ ಹಿರಿಯ ನಟ ಶಿವರಾಮ್ ಅವರು  ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೇರುನಟ ಡಾ.ರಾಜ್ ಕುಮಾರ್ ಹಾಗೂ ಡಾ.ವಿಷ್ಣುವರ್ಧನ್, ಅಂಬರೀಶ್ ಮೊದಲಾದ ನಟರೊಂದಿಗೆ ನಟಿಸಿದ್ದ ಶಿವರಾಮ್ ಅವರು ಶಿವರಾಮಣ್ಣ ಎಂದೇ ಖ್ಯಾತರಾಗಿದ್ದರು. ಕೆ.ಎಸ್.ಎಲ್.ಸ್ವಾಮಿ, ಪುಟ್ಟಣ್ಣ ಕಣಗಾಲ್ ರಂತಹ ನಿರ್ದೇಶಕರ ಜೊತೆಹೆ ಕೆಲಸ ಮಾಡಿದ್ದ ಶಿವರಾಮ್ ಅವರು, 1965ರಲ್ಲಿ ‘ಬೆರೆತ ಜೀವ’ ಎಂಬ ಚಿತ್ರದ ಮೂಲಕ ನಟನೆಗೆ ಕಾಲಿಟ್ಟವರಾಗಿದ್ದಾರೆ.

ತಮ್ಮ ಸಹೋದರ ರಾಮನಾಥನ್ ಅವರ ಜೊತೆಗೆ ಸೇರಿ ‘ರಾಶಿ ಬ್ರದರ್ಸ್’ ಸಿನಿಮಾ ಸಂಸ್ಥೆಯನ್ನು ಆರಂಭಿಸಿ ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ಕಳೆದ ವಾರ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಶಿವರಾಮ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಶಿವರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಟೆಸ್ಟ್ ಮಾಡಿಸಿದ ವೇಳೆ ಎಲ್ಲವು ನಾರ್ಮಲ್ ಆಗಿತ್ತು. ಇದಾದ ಬಳಿಕ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ತಮ್ಮ ರೂಮ್ ಗೆ ಹೋದ ವೇಳೆ ಅವರು ಬಿದ್ದಿದ್ದು, ತಲೆಗೆ ತೀವ್ರವಾದ ಏಟು ತಗಲಿತ್ತು. ಆ ಬಳಿಕ ಕೋಮಾಕ್ಕೆ ಜಾರಿನ ನಟ ಶಿವರಾಮ್ ಅವರ ಮೆದುಳು ನಿಷ್ಕ್ರಿಯವಾಗಿದ್ದು, ಪರಿಣಾಮವಾಗಿ ವೈದ್ಯರ ತೀವ್ರ ಪ್ರಯತ್ನದ ಬಳಿಕವೂ ಅವರು ನಿಧನರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸರನ್ನು ನಾಯಿಗಳು ಎಂದು ನಿಂದನೆ: ಗೃಹ ಸಚಿವರ ವಿರುದ್ಧವೇ ದೂರು ದಾಖಲು

ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದ ನಗರ ಪಾಲಿಕೆ: ಕತ್ತುಕೊಯ್ದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ಈಶ್ವರಪ್ಪ ಪೆದ್ದ, ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲ | ಸಿದ್ದರಾಮಯ್ಯ ವ್ಯಂಗ್ಯ

ಯುವತಿಯ ಎದುರು ಓಲಾ ಕ್ಯಾಬ್ ಚಾಲಕನಿಂದ ಅಶ್ಲೀಲ ವರ್ತನೆ!

ರಸ್ತೆಗೆ ತೆಂಗಿನ ಕಾಯಿ ಒಡೆದು ಉದ್ಘಾಟನೆ: ತೆಂಗಿನ ಕಾಯಿ ಬದಲು ಬಿರುಕು ಬಿಟ್ಟ ರಸ್ತೆ | ಬಿಜೆಪಿ ಶಾಸಕಿಗೆ ಮುಜುಗರ

ಮಂಗಳೂರು: ಶಾಲಾ ವಾಹನ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

ಇತ್ತೀಚಿನ ಸುದ್ದಿ