ಗ್ರಾಮದ ಮುಖ್ಯಸ್ಥೆಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆ - Mahanayaka

ಗ್ರಾಮದ ಮುಖ್ಯಸ್ಥೆಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆ

crime news
28/12/2021

ರಾಯಗಡ: ಗ್ರಾಮದ ಮಹಿಳಾ ಸರಪಂಚ್ ನ್ನು ಬರ್ಬರವಾಗಿ ಹತ್ಯೆ ನಡೆಸಿ, ಆಕೆಯ ನಗ್ನ ದೇಹವನ್ನು ಪೊದೆಯೊಂದರಲ್ಲಿ ಎಸೆದು ಹೋದ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.


Provided by

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ರಸ್ತೆ ಬದಿಯ ಪೊದೆಯ ಸಮೀಪದಲ್ಲಿ ಗೋಣಿ ಚೀಲವೊಂದರಲ್ಲಿ ಮಹಿಳೆಯ ಮೃತದೇಹವನ್ನು ತುಂಬಿಸಿ ಎಸೆಯಲಾಗಿತ್ತು.

ಮೃತದೇಹವನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಸದ್ಯ ಪೊಲೀಸರು ಹತ್ಯೆ ಕೇಸು ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ಮಾಡೋದು ಸರಿಯಲ್ಲ: ಸಚಿವ ಕೆ.ಸುಧಾಕರ್

ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೇಲೆ ತಿರುಗಿ ಬಿದ್ದ ಡಿ.ಕೆ.ಶಿವಕುಮಾರ್

ಸನ್ನಿ ಲಿಯೋನ್ ಗೆ ಎಚ್ಚರಿಕೆ ನೀಡಿದ ಮಧ್ಯಪ್ರದೇಶದ ಗೃಹ ಸಚಿವ!

ಡ್ರಗ್ಸ್ ನೀಡಿ ನನ್ನ ಮಗಳಿಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ:  ಮಂಗಳೂರು ಕಮಿಷನರ್ ಗೆ ದೂರು ನೀಡಿದ ತಾಯಿ

90 ಎಲೆಕ್ಟ್ರಿಕ್ ಬಸ್ ​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ: ಈ ಬಸ್ಸಿನ ವಿಶೇಷತೆ ಏನು?

ರಾಜ್ಯದಲ್ಲಿ ಆಯಾ ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್‌ ಲಸಿಕೆ: ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ