ಫೇಸ್ ಬುಕ್ ನಲ್ಲಿ ಪರಿಚಯ: 15 ವರ್ಷದ ಬಾಲಕನನ್ನು ಮದುವೆಯಾದ 22ರ ಯುವತಿ - Mahanayaka
5:13 AM Wednesday 14 - January 2026

ಫೇಸ್ ಬುಕ್ ನಲ್ಲಿ ಪರಿಚಯ: 15 ವರ್ಷದ ಬಾಲಕನನ್ನು ಮದುವೆಯಾದ 22ರ ಯುವತಿ

fb love
04/01/2022

ಕೋಲ್ಕತ್ತಾ:  ಯುವತಿಯೋರ್ವಳು 15 ವರ್ಷದ ಬಾಲಕನೊಂದಿಗೆ ವಿವಾಹವಾಗಿರುವ ಘಟನೆ ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ನಡೆದಿದ್ದು,  ಬಾಲಕನ ಜೊತೆಗೆ ಯುವತಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿತ್ತು ಎನ್ನಲಾಗಿದೆ.

ಫೇಸ್ ಬುಕ್ ನಲ್ಲಿ ಆದ ಪರಿಚಯ ಪ್ರೀತಿಗೆ ತಿರುಗಿದ್ದು,  ಬಳಿಕ ಡಿಸೆಂಬರ್ 25ರಂದು ಇವರಿಬ್ಬರು ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದಾರೆ.  ನಿನ್ನೆ ಲೋಕಲ್ ಟ್ರೈನ್ ನಲ್ಲಿ ಶಾಂತಿಪುರಕ್ಕೆ ಆಗಮಿಸುತ್ತಿದ್ದ ವೇಳೆ ಇವರನ್ನು ಅನುಮಾನಗೊಂಡ  ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ಮುಟ್ಟಿದ್ದು, ಹೀಗಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಬಾಲಕ ನಾಡಿಯಾದ ಕೃಷ್ಣನಗರ ಪ್ರದೇಶದವನಾಗಿದ್ದು, ಈಗಷ್ಟೇ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಯುವತಿಗೆ 22 ವರ್ಷ ವಯಸ್ಸಾಗಿದ್ದು, ಆಕೆ ಉತ್ತರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಇವರಿಬ್ಬರೂ ವಿವಾಹದ ನಂತರ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

3 ಸಾವಿರ ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಅಫ್ಘಾನಿಸ್ತಾನ

ಮಹಿಳೆಯರ ಅಶ್ಲೀಲ ಚಿತ್ರ ಹರಾಜು ಹಾಕುತ್ತಿದ್ದ ‘ಬುಲ್ಲಿ ಬಾಯ್ಸ್ ಆ್ಯಪ್’ ನಿಷೇಧ

ಅಶ್ವತ್ಥ ನಾರಾಯಣನಿಗೂ ರಾಮನಗರಕ್ಕೂ ಏನು ಸಂಬಂಧ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ವೇದಿಕೆಯಲ್ಲಿಯೇ ಅಶ್ವಥ್ ನಾರಾಯಣ, ಡಿ.ಕೆ.ಸುರೇಶ್ ನಡುವೆ ಜಟಾಪಟಿ

ಲಾಕ್ ಡೌನ್ ಜಾರಿಯಾದರೂ ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ | ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ