ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? | ಬಣ್ಣದ ವರದಿಗಳ ನಡುವೆ ವಾಸ್ತವ ಸ್ಥಿತಿ ಏನು? - Mahanayaka
8:07 AM Thursday 16 - October 2025

ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? | ಬಣ್ಣದ ವರದಿಗಳ ನಡುವೆ ವಾಸ್ತವ ಸ್ಥಿತಿ ಏನು?

covid 19
04/01/2022

ಬೆಂಗಳೂರು: ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಗಳಿವೆ ಎನ್ನುವ ಸುದ್ದಿಗಳು ಖಾಸಗಿ ಸುದ್ದಿ ಮಾಧ್ಯಮಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದ್ದು, ಇದರಿಂದಾಗಿ ಜನರು ಕೂಡ ಆತಂಕದಲ್ಲಿದ್ದಾರೆ. ಆದರೆ, ಸದ್ಯದ ಮಾಹಿತಿಗಳ ಪ್ರಕಾರ ರಾಜ್ಯದಲ್ಲಿ ಲಾಕ್ ಡೌನ್ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗುತ್ತಿದೆ.


Provided by

ಜೀವ ಮಾತ್ರ ಮುಖ್ಯವಲ್ಲ, ಜೀವನ ಕೂಡ ಮುಖ್ಯ ಎನ್ನುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದ್ದು,  ಲಾಕ್ ಡೌನ್ ಬದಲು ಕಠಿಣ ನಿಯಮಗಳನ್ನು ಮಾತ್ರವೇ ಜಾರಿಗೊಳಿಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಕೊವಿಡ್ 2ನೇ ಅಲೆಯನ್ನು ಕೂಡ ರಾಜ್ಯ ಸರ್ಕಾರ ಬಹಳ ಜಾಣ್ಮೆಯಿಂದ ನಿಭಾಯಿಸಿದ್ದು, ಪಾಸಿಟಿವಿಟಿ ದರದ ಆಧಾರದಲ್ಲಿ ಕಠಿಣ ನಿಯಮಗಳನ್ನು ಹಾಕಿತ್ತು. ಶೇ.5ರಷ್ಟು ಪಾಸಿಟಿವಿಟಿ ದರ ಇದ್ದಾಗ ಮಾತ್ರವೇ ಟಫ್ ರೂಲ್ಸ್ ಜಾರಿ ಮಾಡಿತ್ತು. ಇದೇ ಕ್ರಮವನ್ನು ಈ ಬಾರಿಯೂ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ.

ಕೊವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದಷ್ಟೇ, ಗುಣಮುಖರಾಗುವವರ ಸಂಖ್ಯೆ ಕೂಡ ಅಷ್ಟೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದಲ್ಲದೇ ಈ ಬಾರಿ ಕೊವಿಡ್ ಲಸಿಕೆ ಕೂಡ ನೀಡಲಾಗಿದ್ದು, ಹೀಗಾಗಿ ಜನರು ಕೂಡ ಆತ್ಮವಿಶ್ವಾಸದಿಂದಿದ್ದಾರೆ. ಲಸಿಕಾಕರಣವನ್ನು ಹೆಚ್ಚಿಸಿ, ಕೊವಿಡ್ ನಿಯಮಗಳನ್ನು ಕಡ್ಡಾಯಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವುದು ಉತ್ತಮ. ಜನರನ್ನು ಸಂಕಷ್ಟಕ್ಕೀಡು ಮಾಡುವ ಲಾಕ್ ಡೌನ್ ಎಲ್ಲದಕ್ಕೂ ಪರಿಹಾರವಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಮುಖಂಡೆಯ ಮೇಲೆ ಗುಂಡಿನ ದಾಳಿ

ಗರ್ಭಿಣಿ ಪತ್ನಿ ಮನೆಯಲ್ಲಿರುವಾಗಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಇನ್ಸ್ ಪೆಕ್ಟರ್

ಫೇಸ್ ಬುಕ್ ನಲ್ಲಿ ಪರಿಚಯ: 15 ವರ್ಷದ ಬಾಲಕನನ್ನು ಮದುವೆಯಾದ 22ರ ಯುವತಿ

3 ಸಾವಿರ ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಅಫ್ಘಾನಿಸ್ತಾನ

ಇತ್ತೀಚಿನ ಸುದ್ದಿ