ಕೊರಗಜ್ಜನ ವೇಷ ಧರಿಸಿ ಅವಮಾನ:  ವ್ಯಾಪಕ ಖಂಡನೆ - Mahanayaka
8:31 AM Wednesday 20 - August 2025

ಕೊರಗಜ್ಜನ ವೇಷ ಧರಿಸಿ ಅವಮಾನ:  ವ್ಯಾಪಕ ಖಂಡನೆ

uppala
08/01/2022


Provided by

ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಲಾಗಿದೆ ಎಂದು ಕೆಲವು ಮುಸ್ಲಿಮ್ ಯುವಕರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಡೆದಿದ್ದು, ವಧುವಿನ ಮನೆಗೆ ವರನ ಸ್ನೇಹಿತ ಬಳಗ ಆಗಮಿಸಿದ್ದು, ಈ ವೇಳೆ ವರ ಕೊರಗಜ್ಜರನ್ನು ಹೋಲುವ ವೇಷ ಭೂಷಣ ಧರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಮದುಮಗನ ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದೆ.

ಘಟನೆ ಸಂಬಂಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಇನ್ನೂ ಮುಸ್ಲಿಮ್ ಧಾರ್ಮಿಕ ಸಂಘಟನೆಗಳು ಕೂಡ ಈ ಘಟನೆಯನ್ನು ಖಂಡಿಸಿದ್ದು, ಯಾರದ್ದೇ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡಬಾರದು ಕೃತ್ಯ ನಡೆಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕರ್ಫ್ಯೂ ನಡುವೆಯೇ ತೆರೆದ ಬಿಜೆಪಿ ಶಾಸಕರ ಒಡೆತನದ ಶಾಲೆ!

ನಟಿಗೆ ಕೊವಿಡ್ ಪಾಸಿಟಿವ್: ಸತ್ತು ಹೋಗಲು ಬೇಡಿದ ವಿಕೃತರು

ಕುಲ್ಕುಂದದ ಜಾತ್ರೆ / ಎರುಕನಡನ ಬೇಟಿ/ ಕಾರಿ ಕಬಿಲ ಜೋಡಿ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 13

‘ಹರೀಶ ವಯಸ್ಸು 36’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ  ಹಾಡು ಬಿಡುಗಡೆ

ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ

 

ಇತ್ತೀಚಿನ ಸುದ್ದಿ